ನವದೆಹಲಿ : ಬಿಸಿಸಿಐ ವೈದ್ಯಕೀಯ ತಂಡದಿಂದ ಅನುಮತಿ ಪಡೆದ ನಂತ್ರ ಸ್ಟಾರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್ ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನ ಮುನ್ನಡೆಸಲಿದ್ದಾರೆ. ಅನುಭವಿ ಓಪನರ್ ಶಿಖರ್ ಧವನ್ ಅವರ ಉಪನಾಯಕರಾಗಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಸಿಐ, “ಬಿಸಿಸಿಐ ವೈದ್ಯಕೀಯ ತಂಡವು ಕೆ.ಎಲ್.ರಾಹುಲ್ ಅವರನ್ನ ಮೌಲ್ಯಮಾಪನ ಮಾಡಿದೆ ಮತ್ತು ಜಿಂಬಾಬ್ವೆಯಲ್ಲಿ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಅನುಮತಿ ನೀಡಿದೆ. ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಅವರನ್ನ ತಂಡದ ನಾಯಕನನ್ನಾಗಿ ನೇಮಿಸಿದೆ ಮತ್ತು ಶಿಖರ್ ಧವನ್ ಅವರನ್ನು ಅವರ ಉಪನಾಯಕರನ್ನಾಗಿ ನೇಮಿಸಿದೆ” ಎಂದು ತಿಳಿಸಿದೆ.
KL Rahul cleared to play; set to lead Team India in Zimbabwe: BCCI pic.twitter.com/iB8Z3tojOx
— ANI (@ANI) August 11, 2022
3 ಏಕದಿನ ಪಂದ್ಯಗಳಿಗೆ ಭಾರತ ತಂಡ ಇಂತಿದೆ..!
ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಸುಬುಮಾನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.