ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ(84) ಅವರು, ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.
1938ರಲ್ಲಿ ಶಿವಮೊಗ್ಗ ಜಿಲ್ಲೆಯ ನಗರದಲ್ಲಿ ಗಣೇಶ್ ರಾವ್ ಮತ್ತು ರಂಗನಾಯಕಮ್ಮ ದಂಪತಿಗಳ ಪುತ್ರರಾಗಿ ಜನಿಸಿದ್ದರು. ಇವರ ತಾತ ಶಾಮಣ್ಣನವರು ಖ್ಯಾತ ಸಂಗೀತ ವಿದ್ವಾಂಸರು.
ಇವರ ಮೊಮ್ಮಗ ಆಗಿದ್ದ, ಶಿವಮೊಗ್ಗ ಸುಬ್ಬಣ್ಣ ಕೂಡ ಗಾಯಕರಾಗಿ ಗುರ್ತಿಸಿ ಕೊಂಡಿದ್ದರು. ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದರು.ಇಂತಹ ಶಿವಮೊಗ್ಗ ಸುಬ್ಬಣ್ಣ ನಿಧನರಾಗಿದ್ದು, ಇನ್ನಿಲ್ಲವಾಗಿದ್ದಾರೆ.