ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.