ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು.
ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ ಧ್ವಜದ ವಾಕಥಾನ್ ನಡೆಸಲಾಯಿತ್ತು.
ನಗರದ ಎಂಜಿ ರಸ್ತೆಯ ಜೈ ಭೀಮ್ ವಿದ್ಯಾರ್ಥಿನಿಲಯದಿಂದ ಬಿಬಿರಸ್ತೆಯ ಮೂಲಕ ವಾಕಥಾನ್ ಸಾಗಲಾಗಿತ್ತು. ಈ ವಾಕಥಾನ್ನಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.