ನವದೆಹಲಿ : 2022ರ ಕಾಮನ್ವೆಲ್ತ್ ಕ್ರೀಡಾಕೂಟದ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.
BIGG NEWS : ರಾಜ್ಯದಲ್ಲಿ ಕೋವಿಡ್ ಹೆಚ್ಚಳ : 3 ನೇ ಡೋಸ್ ಪಡೆಯಲು ಮನವಿ
ಬರ್ಮಿಂಗ್ ಹ್ಯಾಮ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಕಾಮನ್ ವೆಲ್ತ್ ಗೇಮ್ಸ್ ನ ವಿಜೇತರೊಂದಿಗೆ ಪ್ರಧಾನಮಂತ್ರಿಯವರು ಇದೇ ಮೊದಲ ಬಾರಿಗೆ ಸಂವಾದ ನಡೆಸಲಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ಇಂದು ಬೆಳಿಗ್ಗೆ 11 ಗಂಟೆಗೆ ನನ್ನ ನಿವಾಸದಲ್ಲಿ ಭಾರತದ ಸಿಡಬ್ಲ್ಯೂಜಿ 2022 ತುಕಡಿಯೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ. ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳ ಸಾಧನೆಗಳ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತದೆ” ಎಂದು ಹೇಳಿದ್ದಾರೆ.
ಜುಲೈ 28 ರಿಂದ ಆಗಸ್ಟ್ 8 ರವರೆಗೆ, ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಸುಮಾರು 200 ಭಾರತೀಯ ಕ್ರೀಡಾಪಟುಗಳು 16 ವಿವಿಧ ಕ್ರೀಡೆಗಳಲ್ಲಿ ಪದಕಗಳಿಗಾಗಿ ಸ್ಪರ್ಧಿಸಿದರು. 2022 ರ ಕಾಮನ್ವೆಲ್ತ್ ಗೇಮ್ಸ್ ಅಭಿಯಾನವನ್ನು ಭಾರತ 61 ಪದಕಗಳೊಂದಿಗೆ (22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು) ನಾಲ್ಕನೇ ಸ್ಥಾನದಲ್ಲಿದೆ. ಕುಸ್ತಿ ಆರು ಚಿನ್ನ ಸೇರಿದಂತೆ 12 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ವೇಟ್ ಲಿಫ್ಟಿಂಗ್ 10 ಪದಕಗಳನ್ನು ಹೊಂದಿದೆ.