ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಧ್ಯಾಹ್ನದ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಅನುಮತಿ ಕೋರಿ ರಾಜ್ಯ ಶಿಕ್ಷಣ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
BREAKING NEWS : ದಾವಣಗೆರೆಯಲ್ಲಿ ಕರೆಂಟ್ ಶಾಕ್ ನಿಂದ ಸ್ಥಳದಲ್ಲೇ ದಂಪತಿ ದುರ್ಮರಣ
ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಲಕ್ಷಾಂತರ ಮೆಟ್ರಿಕ್ ಟನ್ ಜೋಳ ಮತ್ತು ರಾಗಿ ಉಗ್ರಾಣಗಳನ್ನು ಬಳಸಿಕೊಂಡು ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಕ್ರಮ ವಹಿಸುವಂತೆ ಕೋರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
‘ಹರ್ ಘರ್ ತಿರಂಗಾ’ : ಗುಜರಾತ್ನ ಗಾಂಧಿನಗರದಲ್ಲಿ ಮಕ್ಕಳೊಂದಿಗೆ ‘ತ್ರಿವರ್ಣ ಧ್ವಜ’ ಹಾರಿಸಿದ ಮೋದಿ ಮಾತೆ ‘ಹೀರಾಬೆನ್’
ಬಿಸಿಯೂಟ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಿರ್ದಿಷ್ಟ ಅನುಪಾತದಲ್ಲಿ ಅನುದಾನ ಒದಗಿಸುತ್ತಿರುವುದರಿಂದ ಈ ಬಗ್ಗೆ ಕೇಂದ್ರದ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಕೇಳಿದೆ. ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಿದರೆ ಬಿಸಿಯೂಟದಲ್ಲಿ ರಾಗಿ ಮುದ್ದೆ,ಜೋಳದ ರೊಟ್ಟಿನೀಡುವ ಪ್ರಸ್ತಾವನೆಗೆ ಸಮ್ಮತಿ ಸೂಚಿಸಲು ನಿರ್ಧರಿಸಿದೆ ಎನ್ನಲಾಗಿದೆ.