ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ದೆಹಲಿ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ 75ನೇ ಸ್ವಾತಂತ್ರ್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
Wrote to hon'ble Defence Minister of India Shri @rajnathsingh expressing my inability to be present at the flag hoisting of our 75th Independence Day being under influence of COVID.
Along with every proud Indian I'll be joining the celebration in spirit of freedom.
Jai hind!🇮🇳 pic.twitter.com/WWjKuhW7Vp
— Leader of Opposition, Rajya Sabha (@LoPIndia) August 13, 2022