ಉತ್ತರಪ್ರದೇಶ : ಬಂದಾ ಜಿಲ್ಲೆಯ ಯಮುನಾ ನದಿಯಲ್ಲಿ ಗುರುವಾರ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ಲಭ್ಯವಾಗಿದೆ.
#UPDATE | NDRF, SDRF & police teams are carrying out rescue ops along with local divers. Three more bodies have been recovered, so far 12 dead bodies have been found. Three bodies are still missing. The flow in the river is high, creating problems in the op: Abhinandan, Banda SP https://t.co/N3lcT1lZaY
— ANI UP/Uttarakhand (@ANINewsUP) August 14, 2022
ದುರಂತದಲ್ಲಿ 10ಕ್ಕೂ ಹೆಚ್ಚು ಜನರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಪೊಲೀಸ್ ತಂಡಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ತಡರಾತ್ರಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಇದುವರೆಗೆ 12 ಮೃತದೇಹಗಳು ಪತ್ತೆಯಾಗಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗಿದೆ ಎಂದು ಬಂದಾ ಎಸ್ಪಿ ಅಭಿನಂದನ್ ತಿಳಿಸಿದ್ದಾರೆ.
‘ಶವಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟನೆ ನಡೆದ 15-20 ಕಿ.ಮೀ ದೂರದಲ್ಲಿ ಶವಗಳು ಪತ್ತೆಯಾಗಿವೆ’ ಎಂದು ಕೃಷ್ಣಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಸಂಜಯ್ ತಿವಾರಿ ತಿಳಿಸಿದ್ದಾರೆ.
30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯು ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. 13 ಮಂದಿ ಈಜಿ ದಡ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.