ಬೆಂಗಳೂರು : ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಸರ್ಕಾರ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ನಿಟ್ಟಿನಲ್ಲಿ ಪಶ್ವಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿದ್ದಾರೆ.
ನಾಳೆಯ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರ ಈದ್ಗಾ ಮೈದಾನದ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ಭದ್ರತೆಗಾಗಿ ಇಂದಿನಿಂದಲೇ ‘ ಪೊಲೀಸರ ಸರ್ಪಗಾವಲು ‘ ಹೆಚ್ಚಾಗಿದೆ.