ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗಾಕ್ಕೆ ಕರೆ ನೀಡಿದ್ದಾರೆ. ಆದರೆ ಧ್ವಜಗಳನ್ನು ವಾಹನಗಳಲ್ಲಿ ಹಾರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಕರೆ ನೀಡಿದ್ದಾರೆ. ಆದರೆ ಕಾರು, ಬೈಕ್ ಅಥವಾ ಇತರ ಯಾವುದೇ ವಾಹನದ ಮೇಲೆ ಭಾರತದ ಧ್ವಜವನ್ನು ಹೊದಿಸುವಂತಿಲ್ಲ. ಕಾನೂನು ಉಲ್ಲಂಘನೆಯಾದರೆ ಜೈಲು ಶಿಕ್ಷೆಗೆ ಗುರಿಯಾಗುವ ಎಚ್ಚರಿಕೆ ನೀಡಲಾಗಿದೆ.
ಭಾರತದ ಧ್ವಜ ಸಂಹಿತೆಯ ಪ್ರಕಾರ, ವಾಹನಗಳ ಹುಡ್, ಮೇಲ್ಬಾಗ, ಹಿಂಭಾಗ ಅಥವಾ ಬದಿಗಳಲ್ಲಿ ಧ್ವಜವನ್ನು ಹೊದಿಸುವುದು ಅಗೌರವವೆಂದು ಪರಿಗಣಿಸಲಾಗುತ್ತದೆ. ಕಾನೂನು ಉಲ್ಲಂಘನೆಯಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.