ಶಿವಮೊಗ್ಗ : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮದ ಅಗತ್ಯ ಇದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಸಾವರ್ಕರ್ ಅವರ ಭಾವಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ವಿರೋಧ ಮಾಡುತ್ತಿದೆ. ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟಗಾರ ಅನ್ನೋದು ಗೊತ್ತಿದೆ. ಸಾವರ್ಕರ್ ಬಗ್ಗೆ ಮಾತನಾಡಲು ಎಸ್ ಡಿಪಿಐನವರು ಯಾರು? ಎಂದು ಕಿಡಿಕಾರಿದ್ದಾರೆ.
BREAKING NEWS : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ : 75 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಬೊಮ್ಮಾಯಿ ಹಸಿರು ನಿಶಾನೆ
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ಒಳ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧಿ, ಜವಾಹರ್ಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.
ಬ್ಯಾರಿಸ್ ಸಿಟಿ ಸೆಂಟರ್ ಮಾಲ್ಗೆ ಬಂದಿದ್ದ ಕಾರ್ಪೊರೇಟರ್ ಒಬ್ಬರ ಪತಿ ಮತ್ತು ಸಾಮಾಜಿಕ ಹೋರಾಟಗಾರ ಆಸಿಫ್ ಮತ್ತು ಆತನ ಸಂಗಡಿಗರು, ಆಕ್ಷೇಪ ವ್ಯಕ್ತಪಡಿಸಿದರು.