ಬೆಂಗಳೂರು : ದೇಶಾದ್ಯಂತ ಇಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ಇಂದು ಬೆಳಿಗ್ಗೆ 8.45ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೈದಾನಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣದ ನಂತರ ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಲಿರುವ ಅವರು ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಮಾಣೆಕ್ ಶಾ ಪರೇಡ್ ಗ್ರೌಂಡ್ನ ಕಾರ್ಯಕ್ರಮಕ್ಕೆ ಈ ಬಾರಿ ಸಾರ್ವಜನಿಕರಿಗೂ ಪ್ರವೇಶ ನೀಡಲಾಗಿದೆ. ಎಂಟು ಸಾವಿರ ಆಮಂತ್ರಣ ಪತ್ರಿಕೆ ನೀಡಲಾಗಿದ್ದು, ಮೈದಾನದ ಒಂದು ಭಾಗವನ್ನು ಸಾರ್ವಜನಿಕರ ಪ್ರವೇಶಕ್ಕೆ ಮೀಸಲಿಡಲಾಗಿದೆ.
1,700 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ. ಭದ್ರತಾ ಕಾರ್ಯದಲ್ಲಿ 9 ಡಿಸಿಪಿ, 15 ಎಸಿಪಿ, 44 ಮಂದಿ ಇನ್ಸ್ಪೆಕ್ಟರ್ಗಳು, 96 ಪಿಎಸ್ಐ, 14 ಮಹಿಳಾ ಪಿಎಸ್ಐ, 77 ಮಂದಿ ಎಎಸ್ಐ ಮತ್ತು 800 ಸಿಬ್ಬಂದಿಗಳು, 10 ಕೆಎಸ್ಆರ್ಪಿ ತುಕಡಿಗಳು ತೊಡಗಿಕೊಳ್ಳಲಿವೆ.