ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.
ಕಿತ್ತೂರುರಾಣಿ ಚೆನ್ನಮ್ಮ, ರಾಯಣ್ಣರನ್ನು ಮರೆಯುವಂತಿಲ್ಲ. ನಾನು ಜಿಲಿಯನ್ ವಾಲಾಬಾಗ್ ಮರೆಯಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕರ ಬಲಿದಾನ ಆಗಿದೆ ಎಂದು ಹೇಳಿದ್ದಾರೆ.
ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಹೊಸದಾಗಿ, 4,050 ಅಂಗನವಾಡಿ ಆರಂಭಿಸಲಾಗಿದೆ. 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಸೈನಿಕರು ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ, ಅಂತಹ ಕುಟುಂಬಸ್ಥ ಒಬ್ಬರು ಸರ್ಕಾರಿ ಉದ್ಯೋಗ ಹಾಗೂ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಹೊಸ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿವರ ಈ ಕೆಳಗಿನಂತಿವೆ.
* ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
*250 ಕೋಟಿ ವೆಚ್ಚದಲ್ಲಿ ಶಾಲಾ- ಕಾಲೇಜುಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
* ಹೊಸದಾಗಿ 4050 ಅಂಗನವಾಡಿ ತೆರೆಯಲು ನಿರ್ಧರಿಸಲಾಗಿದೆ.
* ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
* ಯವಕರ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
* ಕುಶಲ ಕರ್ಮಿಗಳಿಗೆ 50 ಸಾವಿರ ರೂ . ಸಾಲ ಯೋಜನೆ ನೀಡಲಾಗಿದೆ.
*ಭೂ ರಹಿತ ಕೃಷಿ ಕಾರ್ಮಿಕರಿಗೆ ಮಕ್ಕಳಿಗೂ ರೈತ ವಿದ್ಯಾನಿಧಿ
* 8100 ಮಹಿಳೆಯರಿಗೆ ಉದ್ಯೋಗ ಅವಕಾಶಕ್ಕೆ ಯೋಜನೆ
* ಹುತಾತ್ಮ ಯೋಧರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಅವಕಾಶ ನೀಡಲಾಗಿದೆ.