ಬೆಂಗಳೂರು : ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
BIGG NEWS: ಅಮೃತ ಮಹೋತ್ಸವ ಪಾದಯಾತ್ರೆಗೆ ಕೈ ಭರದ ಸಿದ್ಧತೆ; ಫ್ರೀಡಂ ಮಾರ್ಚ್ ವ್ಯವಸ್ಥೆಗಾಗಿ 11 ಉಪಸಮಿತಿ ರಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ, ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ, ಅವರನ್ನು ಉದ್ದೇಶ ಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ ಪಕ್ಷಕ್ಕೆ ಸೇರಿರಲಿ. ಆದರೆ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರು ಭಾವಚಿತ್ರಕ್ಕೆ ಕೊಕ್ಕೆ ಹಾಕಿದ ಇವರು ದೇಶಪ್ರೇಮಿಗಳಲ್ಲ. ದೇಶಪ್ರೇಮದ ಹೆಸರಿನಲ್ಲಿ ದೇಶವನ್ನು ಛಿದ್ರ ಛಿದ್ರ ಮಾಡುತ್ತಿದ್ದಾರೆ ಎಂದರು.