ಬೆಂಗಳೂರು : ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತ ಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ
ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ನೆರೆವರಿಸಿ ಮಾತನಾಡಿ, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿಯೇ ಹೊಸ ಯೋಜನೆಗಳನ್ನು ಘೋಷಣೆ ಮಾಡಿ, ಭರ್ಜರಿ ಗಿಫ್ಟ್ ನೀಡಿದರು.
ಹೀಗಿವೆ ಸಿಎಂ ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು
1. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.
BIGG NEWS : ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಹಾಲಪ್ಪ ಆಚಾರ
2. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ.100ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು ಎಂದರು.
3. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ. ಗಳ ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು.
4. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು.
BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ
5. ಇದಲ್ಲದೆ ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ, ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. 8000 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.