ಬೆಳಗಾವಿ : ಮಹದಾಯಿ ನದಿ ಕುಡಿಯುವ ನೀರು ಯೋಜನೆಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಒಪ್ಪಿಗೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಮಹದಾಯಿ ನದಿ ಕುಡಿಯು ನೀರು ಯೋಜನೆಗೆ ಕೆಲವೇ ದಿನಗಳಲ್ಲಿ ಕೇಂದ್ರದಿಂದ ಒಪ್ಪಿಗೆ ಸಿಗಲಿದೆ ಎಂದು ಹೇಳಿದ್ದಾರೆ.
ಮಹದಾಯಿ ನದಿ ನೀರಿನಲ್ಲಿ 3.9 ಟಿಎಂಸಿ ನೀರು ನಮಗೆ ಕುಡಿಯುವ ಉದ್ದೇಶಕ್ಕಾಗಿ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅನುಮೋದನೆ ದೊರೆಯಲಿದೆ ಎಂದರು.