ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಟ್ರಕ್ ಮನೆಗೆ ನುಗ್ಗಿದ ಪರಿಣಾಮ ನಿವೃತ್ತ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುರವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಮನೆಗೆ ನುಗ್ಗಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮೈನ್ಪುರಿ ಎಸ್ಪಿ ಕಮಲೇಶ್ ದೀಕ್ಷಿತ್ ಮಾತನಾಡಿ, ಮೈನ್ಪುರಿಯಲ್ಲಿ ರಸ್ತೆಯಲ್ಲಿರುವ ಮನೆಗೆ ಟ್ರಕ್ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಈ ವೇಳೆ ನಿವೃತ್ತ ಸಬ್ ಇನ್ಸ್ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಲಾರಿಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಒಬ್ಬರು ಇನ್ನೂ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
BIGG NEWS : ಸೆಪ್ಟೆಂಬರ್ 17 ರಂದು `ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ’ : ಸಚಿವ ಡಾ.ಮುರುಗೇಶ ನಿರಾಣಿ