ಶಿವಮೊಗ್ಗ : ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಭಜರಂಗ ದಳದ ಕಾರ್ಯಕರ್ತ ಸುನೀತ್ ಮೇಲೆ ಹಲ್ಲೆ ಮಾಡಿದ ಆರೋಪಿ ಮುಬಾರಕ್ ಎಂಬಾತನನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಭಜರಂಗ ದಳದ ಕಾರ್ಯಕರ್ತ ಸುನೀತ್ ಎಂಬಾತನನ್ನು ಚಾಕುವಿನಿಂದ ಇರಿಯಲು ಮುಬಾರಕ್ ಎಂಬಾತ ಹಲ್ಲೆ ಗೈದು ತಲೆಮರೆಸಿಕೊಂಡಿದ್ದಾನೆ. ಗಾಯಾಳು ಸುನೀಲ್ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗಿದೆ. ಇದೀಗ ಪೊಲೀಸರರು ಆರೋಪಿಯನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.