ಶಿವಮೊಗ್ಗ: ಸಾವರ್ಕರ್ ಪೋಟೋ ವಿವಾದದಿಂದಾಗಿ ನಗರದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹೀಗಾಗಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಇಂದು ಎಂದಿನಂತೆ ಶಿವಮೊಗ್ಗ-ಭದ್ರಾವತಿ ನಗರದಲ್ಲಿ ಶಾಲಾ-ಕಾಲೇಜುಗಳು ನಡೆಯಲಿವೆ ಎಂಬುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾಹಿತಿ ನೀಡಿದ್ದು, ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ದಿನಾಂಕ 17/08/2022ರ ಇಂದು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಂದಹಾಗೇ, ದಿನಾಂಕಃ15-08-2022 ರಂದು ವೀರಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ.
1) 05 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಭಂದಿಸಿದೆ.
2)ಯಾವುದೇ ಮೆರವಣಿಗೆ, ಸಭೆ, ಸಮಾರಂಬ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇದಿಸಲಾಗಿದೆ.
3)ಯಾವುದೇ ರೀತಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಂಗ್ರಹಿಸುವುದು ನಿಷೇದಿಸಲಾಗಿದೆ.
4)ವ್ಯಕ್ತಿ / ಶವಗಳ ಪ್ರತಿಕೃತಿಗಳನ್ನು ಪ್ರದರ್ಶನ / ದಹನ ಮಾಡುವುದು ಮತ್ತು ಪ್ರಚೋದನಕಾರಿ ಘೋಷಣೆ ಹಾಗೂ ಭಿತ್ತಿಚಿತ್ರಗಳನ್ನು ತೋರಿಸುವುದು ನಿಷೇದಿಸಲಾಗಿದೆ.
5) ದ್ವಿ ಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನ ಗಂಡಸರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. (40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರನ್ನು ಹೊರತು ಪಡಿಸಿ)
6) ರಾತ್ರಿ 09:00 ರಿಂದ ಬೆಳಗಿನ ಜಾವ 05:00 ರವೆಗೆ ದ್ವಿ ಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. (ತುರ್ತು ಸಂದರ್ಭವನ್ನು ಹೊರತು ಪಡಿಸಿ)