ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯದ ಕಾರಣ, ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತ್ರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ದಿನಾಂಕ 13-08-2020ರಂದು ಆರ್ಥಿಕ ಮಿತವ್ಯಯ ಆದೇಶವನ್ನು ಜಾರಿಗೊಳಿಸಿದ್ದರಿಂದ ಖಾಸಗೀ ಅನುದಾನಿತ ಪದವಿ ಕಾಲೇಜುಗಳಲ್ಲಿ ಬಾಕಿ ಇರುವ ಬೋಧಕ-ಬೋಧಕೇತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಕ್ರಮ ಕೈಗೊಂಡಿರಲಿಲ್ಲ ಎಂದಿದ್ದಾರೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಇದೀಗ ತುರ್ತಾಗಿ ಈ ಹುದ್ದೆಗಳ ಭರ್ತಿಗೆ ಅಗತ್ಯವಿರುವಂತ ಎಲ್ಲಾ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಖಾಲಿ ಹುದ್ದೆಗಳ ಮಾಹಿತಿಯನ್ನು, ಅನುದಾನಿತ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳೊಂದಿಗೆ, ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಗೆ ಮೂರು ದಿನದೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.