ಬೆಂಗಳೂರು: ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಇದೇ ಆಗಸ್ಟ್ 26 ರಂದು ಕೊಡಗಿನಲ್ಲಿ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಬರೋಬ್ಬರಿ ಒಂದು ಲ ಮಂದಿಯನ್ನು ಸೇರಿಸಲು ಸಿದ್ದತೆಯನ್ನು ನಡೆಸಲು ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಕ್ಕರು ಕೊಡಲು ಮುಂದಾಗಿರುವುದು ಸುಳ್ಳಲ್ಲ. ಇನ್ನೂ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿರವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಕರ್ನಾಟಕ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.
ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಅಂತ ಹೇಳಿದ್ದಾರೆ.