ಶಿವಮೊಗ್ಗ: ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರ ಹಾಗೂ ಚಾಕು ಇರಿತ ಪ್ರಕರಣಗಳಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಈಗ ಆಗಸ್ಟ್ 23ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಶಿವಮೊಗ್ಗ: ನಾಳೆ ‘ಸೊರಬ ತಾಲೂಕಿ’ನ ಆನವಟ್ಟಿಯ ಲಕ್ಕವಳ್ಳಿಯಲ್ಲಿ ‘ತಹಶೀಲ್ದಾರ್ ನಡೆ ಹಳ್ಳಿ ಕಡೆ’ ಕಾರ್ಯಕ್ರಮ
ಈ ಬಗ್ಗೆ ಆದೇಶ ಹೊರಡಿಸಿರುವಂತ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿಯವರು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ 144 ಸೆಕ್ಷನ್ ಅಡಿಯಲ್ಲಿ ದಿನಾಂಕ 20-08-2022ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 23-08-2022ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯಗೆ ಪಶ್ಚಾತಾಪವಾಗಿದೆ – ಬಾಳೆಹೊನ್ನೂರು ಶ್ರೀ
ನಿಷೇಧಾಜ್ಞೆಯ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಕ್ಕೆ, ವಿಜಯೋತ್ಸವಕ್ಕೆ, ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.