ಹಾಸನ: ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿನ ಬಾಳೆಹೊನ್ನೂರು ಮಠಕ್ಕೆ ಭೇಟಿ ನೀಡಿದ್ದರು. ನಂತರ ಶ್ರೀಗಳು ಹೇಳಿಕೆ ನೀಡದ್ದರು, ಲಿಂಗಾಯುತ ಧರ್ಮ ಒಡೆಯುವ ಕೆಲಸ ಮಾಡಲ್ಲ ಎಂದು ಪಶ್ಚಾತಾಪ ಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS: ಶಾಲಾ ಬಸ್- ಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತ; ಇಬ್ಬರು ಚಾಲಕರು ದುರ್ಮರಣ
ನಾನು ರಂಭಾಪುರಿ ಶ್ರೀಗಳ ಬಳಿ ಯಾವ ನೋವು ಹೇಳಿಕೊಂಡಿಲ್ಲ, ಪಶ್ಚಾತ್ತಾಪ ಪಟ್ಟಿಲ್ಲ, ಅವತ್ತು ಏನಾಯ್ತು ಅಂತ ಹೇಳಿದ್ದೇನೆ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಹೇಳಿಕೆ ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಹೇಳಿದರು.
BREAKING NEWS: ಶಾಲಾ ಬಸ್- ಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತ; ಇಬ್ಬರು ಚಾಲಕರು ದುರ್ಮರಣ
ಇನ್ನು ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಭೇಟಿ ಕೊಟ್ಟಿದ್ದರು. ಆದರೆ ಇನ್ನಿಬ್ಬರು ಮುಸಲ್ಮಾನರು ಸತ್ತಿದ್ದಾರಲ್ಲ ಅವರ ಮನೆಗು ಹೋಗಬೇಕು, ಪರಿಹಾರವನ್ನು ಕೊಡಬೇಕಲ್ವಾ, ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಇನ್ಯಾರೆ ಇರಲಿ ಎಲ್ಲರಿಗೂ ಪರಿಹಾರ ಕೊಡಬೇಕು ಎಂದು ಹೇಳಿದ್ದಾರೆ.