ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಶಾಸಕ ಅಪ್ಪಚ್ಚು ರಂಜನ್ ಆಪ್ತ ಸಂಪತ್ ಎಂದು ತಿಳಿದುಬಂದಿದೆ.
ಗುರುವಾರದಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಸಂಪತ್ ಮೊಟ್ಟೆ ಎಸೆದಿದ್ದನು. ಈತ ಮೊಟ್ಟೆ ಎಸೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಚಾರವಾಗಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಮೊಟ್ಟೆ ಎಸೆದ ಸಂಪತ್ ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸಂಪತ್ ನಮ್ಮ ಕಾರ್ಯಕರ್ತನಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಂಪತ್ ವಿರುದ್ಧ ಕೂಡಲೇ ಪೊಲೀಸರು ಕ್ರಮ ಕೈಗೊಳ್ಳಲ್ಲಿ. ಆತ ಅದು ನನ್ನ ಜೊತೆಗೆ ರಾಮನವಮಿದಿನದಂದು ಫೋಟೋ ತೆಗೆಸಿಕೊಂಡಿದ್ದಾನೆ. ಫೋಟೋ ತೆಗೆಸಿಕೊಂಡವರೆಲ್ಲಾ ಬಿಜೆಪಿ ಕಾರ್ಯಕರ್ತರಲ್ಲ ಎಂದು ಹೇಳಿದ್ದಾರೆ.