ಜಮ್ಮು ಮತ್ತು ಕಾಶ್ಮೀರ: ರಿಯಾಸಿ ಜಿಲ್ಲೆಯ ತ್ರಿಕೂಟಾ ಬೆಟ್ಟಗಳ ಮೇಲಿರುವ ವೈಷ್ಣೋದೇವಿ ದೇವಾಲಯಕ್ಕೆ ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗರ್ಗ್ ಅವರು ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಸಾವುನೋವು ಅಥವಾ ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಹೇಳಿದರು.ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಹಲವಾರು ವೀಡಿಯೊಗಳು ವೈಷ್ಣೋದೇವಿ ಟ್ರ್ಯಾಕ್ನಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಉಂಟಾಗಿದೆ.