ಬೆಂಗಳೂರು: ಇನ್ನೇನು ಗೌರಿ-ಗಣೇಶ ಹಬ್ಬ ಹತ್ರ ಬರುತ್ತಿದೆ. ಇದಕ್ಕಾಗಿ ನಗರದ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಗಣೇಶನ ಕೂರಿಸಿ ಹಬ್ಬವನ್ನ ಸಂಭ್ರದಿಂದ ಆಚರಿಸುತ್ತಾರೆ.
BREAKING NEWS: ಜಾನುವಾರು ಕಳ್ಳಸಾಗಣೆ ಪ್ರಕರಣ: ಟಿಎಂಸಿ ನಾಯಕ ಅನುಬ್ರತಾ ಮೊಂಡಲ್ 4 ದಿನಗಳ CBI ಕಸ್ಟಡಿ
ಕೊರೊನಾದಿಂದ ಕಳೆದ ಎರಡು ವರ್ಷ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುವುದಕ್ಕೆ ಆಗಿಲ್ಲ. ಆದರೆ ಈ ಬಾರಿ ಎಲ್ಲದಕ್ಕೂ ಅನುಮತಿಯನ್ನು ಸರ್ಕಾರ ನೀಡಿದೆ. ಆದರೆ ನಗರದ ಪ್ರಮುಖ ಬೀದಿಗಳಲ್ಲಿ 15 ದಿನಕ್ಕಿಂತ ಹೆಚ್ಚು ಗಣೇಶನನ್ನು ಕೂರಿಸುವಂತಿಲ್ಲ. ಆಗಸ್ಟ್ 31ರಿಂದ ಸೆಪ್ಟೆಂಬರ್ 15 ದಿನಗಳ ವರೆಗೆ ಮಾತ್ರ ಗಣೇಶನ ಕೂರಿಸಲು ಅವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.