ಬೆಂಗಳೂರು: ನಗರದ ಜೆಜೆ ನಗರದಲ್ಲಿ ತಂದೆಯ ಅಕ್ರಮ ಸಂಬಂಧದಿಂದ ಬೇಸತ್ತು ಮಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
BIGG NEWS: ʼರಾಜಕೀಯʼ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ ನಟಿ ತ್ರಿಷಾ; ʼಕಾಂಗ್ರೆಸ್ʼ ಗೆ ಸೇರುವ ಸಾಧ್ಯತೆ
19 ವರ್ಷದ ಚಂದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮತ್ತೆ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ನಂತರ, ಮಗ ಚಂದು ರೂಮ್ ಬಾಗಿಲು ಹಾಕಿಕೊಂಡಿದ್ದ. ಆದರೆ ಬೆಳಗ್ಗೆ ರೂಮ್ ಬಾಗಿಲು ತೆಗೆದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.