ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 1ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ದಿನಾಂಕವನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ನಿಗದಿಗೊಳಿಸಿದ್ದಾರೆ. ಅಂದು ಕಾರ್ಯಕ್ರಮಕ್ಕೆ ಅವರು ಆಗಮಿಸಲಿದ್ದಾರೆ ಎಂದರು.