ಮಡಿಕೇರಿ: ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಕೊಡಗು ಭೇಟಿಯ ಸಂದರ್ಭದಲ್ಲಿ, ಬಿಜೆಪಿ ಕಾರ್ಯಕರ್ತ ಸಂಪತ್ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಈ ಪ್ರಕರಣದಲ್ಲಿ ಅವರನ್ನು ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಅವರ ಬಂಧನವಾದ 8 ಗಂಟೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆಗಸ್ಟ್.18ರಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಕೊಡಗು ಪ್ರವಾಸ ಕೈಗೊಂಡಿದ್ದ ವೇಳೆಯಲ್ಲಿ, ಬಿಜೆಪಿ ಕಾರ್ಯಕರ್ತ ಸಂಪತ್, ಮೊಟ್ಟೆ ಎಸೆದಿದ್ದನು. ಹೀಗಾಗಿ ಕೂಡಲೇ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದರು.
ಈ ಪ್ರಕರಣ ಸಂಬಂಧ ಆರೋಪಿ ಸಂಪತ್ ಮಡಿಕೇರಿಯ ಕುಶಾಲನಗರದ ಜೆಎಂಎಫ್ ಸಿ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಆರೋಪಿ ಸಂಪತ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
BIGG NEWS: ಇಯರ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಸಾವು
ಅಂದಹಾಗೇ, ಕಳೆದ 8 ಗಂಟೆಯ ಹಿಂದಷ್ಟೇ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಂತ ಆರೋಪಿ ಸಂಪತ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ 8 ಗಂಟೆಯಲ್ಲೇ ಆರೋಪಿಗೆ ನ್ಯಾಯಾಲಯ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ.