ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
BIGG NEWS : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ‘ಪ್ರೌಢ ಶಾಲಾ ಮುಖ್ಯ ಶಿಕ್ಷಕ’ರಿಗೆ ಭರ್ಜರಿ ಸಿಹಿಸುದ್ದಿ
ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ.8 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಜನೋತ್ಸವ ಆಯೋಜಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ ಎಂದರು.
ರಾಜ್ಯ ಬಿಜೆಪಿ ಸರ್ಕಾರದ 3 ವರ್ಷದ ಸಾಧನೆಗಳನ್ನು ಜನರಿಗೆ ತಿಳಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮ ಈ ಹಿಂದೆ 2 ಬಾರಿ ರದ್ದಾಗಿತ್ತು. ಜುಲೈ 28 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು. ಬಳಿಕ ಆಗಸ್ಟ್ 28 ರಂದು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಗಣೇಶ ಚತುರ್ಥಿ ಕಾರಣ ಮುಂದೂಡಲಾಗಿತ್ತು.