ಹಾವೇರಿ: ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 21ರ ಭಾನುವಾರ ಜಿಲ್ಲಾ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
BIGG NEWS : ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಳಿಗ್ಗೆ 8-30 ಕ್ಕೆ ಬೆಂಗಳೂರಿನಿಂದ ಹೊರಟು, ಹುಬ್ಬಳ್ಳಿ ಮಾರ್ಗವಾಗಿ ಬೆಳಿಗ್ಗೆ 11 ಗಂಟೆಗೆ ಶಿಗ್ಗಾಂವಿಗೆ ಆಗಮಿಸಿ ಕೋಟ್ ಆವರಣದಲ್ಲಿ ಆಯೋಜಿಸಿರುವ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12-45ಕ್ಕೆ ಸವಣೂರ ಕೋಟ್ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 2-15ಕ್ಕೆ ಸವಣೂರಿನಿಂದ ಹಾವೇರಿಗೆ ಆಮಿಸಲಿದ್ದಾರೆ. ಮಧ್ಯಾಹ್ನ 3-30 ಗಂಟೆಗೆ ಹಾವೇರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5-30ಕ್ಕೆ ಹಾವೇರಿ ಪ್ರವಾಸಿ ಮಂದಿರದ ಹತ್ತಿರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. 5-45ಕ್ಕೆ ಹಾವೇರಿಯಿಂದ ಪ್ರಯಾಣಬೆಳೆಸಿ ಶಿಗ್ಗಾಂವ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.