ಬೆಂಗಳೂರು: ಕಾವೇರಿ, ಲಕ್ಷ್ಮಣತೀರ್ಥ, ಹೇಮಾವತಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 14,15,16 ರಂದು ಅದ್ದೂರಿ ಮಹಾಕುಂಭ ಮೇಳ ಆಯೋಜಿಸಲು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಿರ್ದೇಶನ ನೀಡಿದ್ದಾರೆ.
BIGG NEWS: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಮನೋರಂಜನ್; ಸಂಗೀತಾ ಕೈ ಹಿಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ
ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಚಂದ್ರವನದ ಮಹಾಂತ ಶಿವಯೋಗಿ ಸ್ವಾಮೀಜಿಗಳ ನೇತೃತ್ವದಲ್ಲಿ ನಿನ್ನೆ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಿಲಾಗಿದೆ.
BIGG NEWS: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಮನೋರಂಜನ್; ಸಂಗೀತಾ ಕೈ ಹಿಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ
ಕುಂಭ ಮೇಳವನ್ನು ಯಶ್ವಸಿಯಾಗಿ ಆಯೋಜಿಸಬೇಕು. ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿ. ಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಸಾಧುಸಂತರು, ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಠದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.