ಮೈಸೂರು : ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನೀರಾವರಿ ಇಲಾಖೆಗೆ 600 ಕೋಟಿ ರೂ. ನಷ್ಟವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರಜೋಳ, ಭಾರೀ ಮಳೆಯಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ‘ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ’ ಎಂದು ಕಾರಜೋಳ ಹೇಳಿದರು.
ವೈಷ್ಣೋ ದೇವಿ ಯಾತ್ರಾರ್ಥಿಗಳಿಗೆ ʻರೇಡಿಯೊ ಫ್ರೀಕ್ವೆನ್ಸಿ ಗುರುತಿನ ಚೀಟಿʼ ಪರಿಚಯ… ಏನಿದರ ಉಪಯೋಗ?
ರಾಜ್ಯದಲ್ಲಿ ಅತಿವೃಷ್ಟಿಯಿಂದ ನೀರಾವರಿ ಇಲಾಖೆಗೆ 600 ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲೆಯಲ್ಲಿ 8.15 ಕೋಟಿ ರೂ. ವೆಚ್ಚದಲ್ಲಿ 25 ಕಾಮಗಾರಿ ನಡೆಸಲು ಸೂಚನೆ ನೀಡಿದ್ದೇನೆ. ತುಮಕೂರು ಜಿಲ್ಲೆಗೆ 50 ಕೋಟಿ ರೂ. ಮಂಡ್ಯ ಜಿಲ್ಲೆಗೆ 50 ಕೋಟಿ ರೂ. ಅನುದಾನ ಕೊಡಲಾಗಿದೆ ಎಂದು ಹೇಳಿದ್ದಾರೆ.