ಕಲಬುರಗಿ : ರಾಜ್ಯದಲ್ಲಿ ಮತ್ತೆ ಅಜಾನ್ ದಂಗಲ್ ಶುರುವಾಗಿದ್ದು, ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆಗಸ್ಟ್ 23 ರ ನಾಳೆಯಿಂದ ಮತ್ತೆ ಹೋರಾಟಕ್ಕೆ ಹಿಂದೂ ಸಂಘಟನೆಗಳು ನಿರ್ಧರಿಸಿವೆ.
BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ `ಜನೋತ್ಸವ ಕಾರ್ಯಕ್ರಮಕ್ಕೆ’ ಡೇಟ್ ಫಿಕ್ಸ್
ಅನಧಿಕೃತ ಅಜಾನ್ ಲೌಡ್ ಸ್ಪೀಕರ್ ವಿರುದ್ಧ ಹಿಂದೂ ಸಂಘಟನೆಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಮಸೀದಿ ಧ್ವನಿವರ್ಧಕ ವಿರುದ್ಧ ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಎಸ್ಪಿ ಕಚೇರಿಗಳ ಎದುರು ಪ್ರತಿಭಟನೆಗೆ ಶ್ರೀರಾಮಸೇನೆ ಕರೆ ನೀಡಿದೆ.
ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ಹಲವು ಮಸೀದಿಗಳಲ್ಲಿ ಇನ್ನೂ ಆಜಾನ್ ಕೂಗಲು ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರ ಮಂಗಳವಾರದಂದು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.