ಗದಗ: ಮಾಂಸ ತಿಂದು ದೇವಸ್ಥಾನಕ್ಕೆ ನೀಡುವ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ವಾಗ್ದಾಳಿ ನಡೆಸಿದ್ದಾರೆ.
ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೆನು ಎಂಬ ಈ ಭಂಡತನ ಯಾರೂ ಸಹ ಒಪ್ಪುವುದಿಲ್ಲ. ನಮ್ಮ ನಾಡಿಗೆ ಒಂದು ಸಂಸ್ಕೃತಿ, ಪರಂಪರೆ, ಧಾರ್ಮಿಕ ಶ್ರದ್ಧೆ ಇದೆ. ಇದೆಲ್ಲವನ್ನು ನಂಬಿ ಜೀವನ ಸಾಗಿಸುವ ಅಪಾರ ಜನರು, ಭಕ್ತರು ಇದ್ದಾರೆ. ಆದರೆ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡುವುದರಿಂದ ಇತರರ ಮನಸ್ಸಿಗೆ ಘಾಸಿಯನ್ನುಂಟು ಮಾಡಬಾರದು.
ನಮ್ಮ ನಡುವಳಿಕೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದೇ ಬಿಟ್ಟಿದೇವೆ ಎನ್ನುವ ಅತಿಯಾದ ಆತ್ಮವಿಶ್ವಾಸದಲ್ಲಿ ಮುನ್ನುಗ್ಗುತ್ತಿದ್ದಾರೆ. ಎಂದು ಹೇಳಿದ್ದಾರೆ.