ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಜನರಿಗೆ ಸಂಕಷ್ಟವೂ ಜಾಸ್ತಿಯಾಗಿತ್ತು. ಈ ವೇಳೆ ಸಿಲಿಕಾನ್ ಸಿಟಿಯ ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರಲ್ಲಿ ಭಾರೀ ಹಣ ವಸೂಲಿ ಮಾಡಿದ ಆರೋಪ ಹಿನ್ನೆಲೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಹಾಗೂ 30 ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
BIG NEWS: ಮಾಂಸಹಾರಿಗಳಿಗೆ ರಾಜ್ಯದ ‘ದೇವಸ್ಥಾನ ಪ್ರವೇಶ ನಿಷಿದ್ಧ’ : ಹೀಗೊಂದು ಚರ್ಚೆ ಸಾಮಾಜಿಕ ಜಾಲತಾಣದಲ್ಲಿ
ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ನೀಡಿದ್ದರು ಈ ದೂರಿನ ಮೇರೆಗೆ 577 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಈ ಪೈಕಿ 450ಕ್ಕೂ ಹೆಚ್ಚು ಆಸ್ಪತ್ರೆಗಳು ನೋಟಿಸ್ಗೆ ಪ್ರತಿಕ್ರಿಯೆ ಶುರುವಾಗಿದೆ.
BIG NEWS: ಮಾಂಸಹಾರಿಗಳಿಗೆ ರಾಜ್ಯದ ‘ದೇವಸ್ಥಾನ ಪ್ರವೇಶ ನಿಷಿದ್ಧ’ : ಹೀಗೊಂದು ಚರ್ಚೆ ಸಾಮಾಜಿಕ ಜಾಲತಾಣದಲ್ಲಿ
ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ ಹಣವನ್ನೂ ವಾಪಸ್ ನೀಡಿವೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡದ 30 ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಅಡಿಯಲ್ಲಿ ಚಿಕಿತ್ಸೆ ನೀಡಲು ಆದೇಶಿಸಿತ್ತು. ಅದಕ್ಕಾಗಿ ಸಂಬಂಧಪಟ್ಟ ಆಸ್ಪತ್ರೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ವೆಚ್ಚ ಬರಿಸಿತ್ತು.
BIG NEWS: ಮಾಂಸಹಾರಿಗಳಿಗೆ ರಾಜ್ಯದ ‘ದೇವಸ್ಥಾನ ಪ್ರವೇಶ ನಿಷಿದ್ಧ’ : ಹೀಗೊಂದು ಚರ್ಚೆ ಸಾಮಾಜಿಕ ಜಾಲತಾಣದಲ್ಲಿ
ಆದರೂ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಆದರೆ 30 ಆಸ್ಪತ್ರೆಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ.