ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯೊಬ್ಬಳು ತನ್ನ ಮೂರುವರೆ ವರ್ಷದ ಮಗುವನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಭ್ರಷ್ಟಾಚಾರ ಆರೋಪ: ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಮಾಜಿ ಸಚಿವ ʻಭರತ್ ಭೂಷಣ್ ಆಶುʼ ಅರೆಸ್ಟ್
ಬೆಂಗಳೂರಿನ ಹೆಚ್ ಎಎಲ್ ವಿಭೂತಿಪುರದಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಮೂರುವರೆ ವರ್ಷದ ಸಂಯುಕ್ತಳನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಗಾಯತ್ರಿ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಮನೆಗೆ ಬಂದ ಪತಿ ನರೇಂದ್ರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ನಿ ಗಾಯತ್ರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯತ್ರಿ ಡೆತ್ ನೋಟ್ ಬರೆದಿದ್ದು, ನನ್ನ ಸಾವಿಗೆ ನಾನೇ ಕಾರಣ, ಬಂದ ಕಷ್ಟಗಳನ್ನು ಎದುರಿಸಲು ಶಕ್ತಿ ಇಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದರು. ಘಟನೆ ಸಂಬಂಧ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ `ಪೌರ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ಕಾಯಂ ಆದೇಶ