ಮುಂಬೈ: ಮುಂಬೈನ ಲಲಿತ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೋಟೆಲ್ ನ ನಾಲ್ಕ ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ. ಹೋಟೆಲ್ ಒಂದರಲ್ಲಿ ಬಾಂಬ್ ಬೆದರಿಕೆ ಬಂದಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ಹೋಟೆಲ್ ಸಂಬಂಧಿಸಿದ ಹುಸಿ ಬಾಂಬ್ ಬೆದರಿಕೆಯನ್ನು ಸೋಮವಾರ ಸಂಜೆ ಸ್ವೀಕರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಹೋಟೆಲ್ ನ ನಾಲ್ಕು ಸ್ಥಳಗಳಲ್ಲಿ ಬಾಂಬ್ ಗಳನ್ನು ಇಡಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ. ಈ ವೇಳೆ ಬಾಂಬ್ ನಿಷ್ಕ್ರಿಯ ಮಾಡಲು ಐದು ಕೋಟಿ ಕೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪಾಕಿಸ್ತಾನಿ ಸಂಖ್ಯೆಯಿಂದ 26/11 ರಂತಹ ಭಯೋತ್ಪಾದಕ ದಾಳಿಯ ಬೆದರಿಕೆಯನ್ನು ನಗರ ಪೊಲೀಸರು ಸ್ವೀಕರಿಸಿದ ಕೆಲವೇ ದಿನಗಳ ನಂತರ ಇದು ಬಂದಿದೆ.