ಮಡಿಕೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು, ನಾವು ಹೋರಾಟ ಶುರು ಮಾಡಿದಾಗೆಲ್ಲಾ 144 ಸೆಕ್ಷನ್ ಜಾರಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
BIGG NEWS: ತುಮಕೂರಿನಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತ ಬಲಿ
ಬೆಂಗಳೂರಿನಲ್ಲಿ ಮಾತನಾಡಿದ ಅವರು, 144 ಸೆಕ್ಷನ್ ಹಾಕಿ, ಕೇಸ್ ಹಾಕೋದು ಒಂಥರಾ ಸರ್ಕಾರದ ಚಾಳಿ ಆಗಬಿಟ್ಟಿದೆ. ಶಾಸಕಾಂಗ ಪಕ್ಷದ ನಾಯಕರ ಜತೆ ಮಾತನಾಡಿ ನಿರ್ಧಾರ ತಿಳಿಸುತ್ತೇವೆ. ತಮ್ಮ ನಿರ್ಧಾರ ತಿಳಿಸುವುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.