ನವದೆಹಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ರಾಹುಲ್ ಗಾಂಧಿ(Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ನಂತ್ರ, ರಾಹುಲ್ ಗಾಂಧಿ ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. .
ಮಂಗಳವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆ ಸೋನಿಯಾ ಗಾಂಧಿ ಅಧ್ಯಕ್ಷ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
Big news: ಚಿಕ್ಕ ಮಕ್ಕಳಲ್ಲಿ `ಟೊಮೆಟೊ ಜ್ವರ’ದ ಅಪಾಯ ಹೆಚ್ಚು: ಅಧ್ಯಯನ | tomato flu