ಶಿವಮೊಗ್ಗ : ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ(ನಿದಿಗೆ-2ನೇ ಹೋಬಳಿ) ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ಆಗಸ್ಟ್ 27 ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆ ದಿನದಂದು ಎಲ್ಲಾ ಮತದಾರರು, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಯ ಕಾರ್ಯಕ್ಕಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳ(ಬಿಎಲ್ಓ) ಮೂಲಕ ನಿಗದಿತ ನಮೂನೆ-6ಬಿ ಯಲ್ಲಿ ಅರ್ಜಿ ಸಲ್ಲಿಸಬಹುದು.
ಮುಂದುವರೆದು ಮತದಾರರೇ ಸ್ವತಃ ಚುನಾವಣಾ ಆಯೋಗದ ಅಧಿಕೃತ ವೆಬ್ ಪೋರ್ಟಲ್ https://www.nvsp.in ಹಾಗೂ ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ VHA app ನಲ್ಲಿ ಆಧಾರ್ ಜೋಡಣೆ ಮಾಡಿಕೊಳ್ಳುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದ್ದಾರೆ.
ಗಮನಿಸಿ: ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್ ಪಡೆದುಕೊಳ್ಳಲು ಹೀಗೆ ಮಾಡಿ