ಬೆಂಗಳೂರು: ‘ಈ ಹಿಂದೆ 10 ಸಾವಿರ ಶಿಕ್ಷಕರ ಹುದ್ದೆಗೆ ( Teacher Recruitment ) ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸುಮಾರು 3,800 ಶಿಕ್ಷಕರು ಮಾತ್ರ ಭರ್ತಿಯಾಗಿದ್ದರು. ಈ ಬಾರಿ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ( Teacher Jobs ) ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಹುದ್ದೆಗಳು ಭರ್ತಿಯಾಗಬಹುದು ಎಂಬ ವಿಶ್ವಾಸವಿದೆ. ನವೆಂಬರ್ನಲ್ಲಿ ಟಿಇಟಿ ಪರೀಕ್ಷೆ ಹಾಗೂ ಮುಂದಿನ ವರ್ಷ ಫೆಬ್ರವರಿಯಲ್ಲಿ ಮತ್ತೊಂದು ಸುತ್ತಿನ ಸಿಇಟಿ ಪರೀಕ್ಷೆ ನಡೆಸಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಲಿದೆ. ಈ ಮೂಲಕ ಶಿಕ್ಷಕರ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತೇವೆ’ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಘೋಷಣೆ ಮಾಡಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
BIG NEWS: ರಾಜ್ಯ ಸರ್ಕಾರದಿಂದ ಮಹಾ ಎಡವಟ್ಟು: ಸತ್ತವರಿಗೂ ಪ್ರತಿಷ್ಠಾನದ ಸದಸ್ಯರಾಗಿ ನೇಮಿಸಿ ಆದೇಶ
ಇಂದು ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಉಪಕ್ರಮದಡಿ, ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಯಿಂದ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಬೆಂಗಳೂರಿನ ತಿಮ್ಮಯ್ಯ ರಸ್ತೆಯಲ್ಲಿರುವ ಕಾರ್ಪೊರೇಷನ್ ಶಾಲೆಯಲ್ಲಿ ನಡೆದ ಕಾರ್ಯಕ್ರಮಲ್ಲಿ ಉದ್ಘಾಟಿಸಿ ಸಚಿವರು ಮಾತನಾಡಿದ ಅವರು, ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಹೇಳಿದರು.
‘ಅನ್ನ, ಆಹಾರ ಮತ್ತು ಆರೋಗ್ಯವನ್ನು ಮಾರಾಟ ಮಾಡಬಾರದು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿರುವ ಮತ್ತು ಅದನ್ನು ಜಗತ್ತಿಗೆ ಸಾರಿರುವ ದೇಶ ಭಾರತ. ದುರಾದೃಷ್ಟವಷಾತ್, ಬ್ರಿಟಿಷರ ಆಳ್ವಿಕೆ ಸಂದರ್ಭದಲ್ಲಿ ದೇಶದ ಪ್ರತಿಯೊಂದು ಸೇವೆ, ಕಾರ್ಯಗಳು ವ್ಯಾಪಾರೀಕರಣಗೊಂಡವು. ಅದಕ್ಕೆ ಶಿಕ್ಷಣವೂ ಹೊರತಾಗಲಿಲ್ಲ. ಸ್ವಾವಲಂಬಿ, ಸ್ವಾಭಿಮಾನಿ ಶಿಕ್ಷಣ ನೀಡುವ ಭಾರತದ ಶಿಕ್ಷಣ ಪದ್ಧತಿಯನ್ನು ಹಾಳು ಮಾಡಿ, ತಮ್ಮ ಅನುಕೂಲಕ್ಕೆ ತಕ್ಕಂತೆ ಭಾರತೀಯರನ್ನು ಬಳಸಿಕೊಳ್ಳುವ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಬ್ರಿಟಿಷರು ಜಾರಿಗೊಳಿಸಿದರು. ಇದರಿಂದ ಭಾರತ ಇಂದಿಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ವಿದೇಶಿ ಸೇವಕರ ಮನಸ್ಥಿತಿಯಲ್ಲೇ ಬದುಕುವುದನ್ನು ಬದಲಿಸಲು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಜಾರಿಗೊಳಿಸಲಾಗುತ್ತಿದೆ’ ಎಂದು ಸಚಿವರು ಹೇಳಿದರು.
BREAKING NEWS: ಏಷ್ಯಾಕಪ್ 2022ಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ | VVS Laxman
‘ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ ಸೇರಿದಂತೆ ದೇಶದ ಅನೇಕ ಮಹನೀಯರು ಕಂಡ ಕನಸಿನ ಶಿಕ್ಷಣವನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಯತ್ನಿಸುತ್ತಿದ್ದಾರೆ. ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಎನ್ಇಪಿ ಮೂಲಕ ಸುಧಾರಣೆಗೆ ಪ್ರಯತ್ನಿಸಲಾಗುತ್ತಿದೆ’ ಎಂದು ಸಚಿವರು ನುಡಿದರು.
‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನೇಕ ಸಂಸ್ಥೆಗಳು, ಉದ್ಯಮಿಗಳು ಕೈಜೋಡಿಸುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಸುಧಾರಣೆ ಸಲಹೆಗಾರರಾದ ಡಾ. ಎಂ.ಆರ್. ದೊರೆಸ್ವಾಮಿ ಅವರ ಪ್ರಯತ್ನ ಉತ್ತಮವಾದದ್ದು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಸೋಮಶೇಖರ್ ನೆರವಾಗಿರುವುದು ಶ್ಲಾಘನೀಯ. ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರ ಸಾರ್ಥಕವಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು. ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘ-ಸಂಸ್ಥೆಗಳು ಮುಂದೆ ಬರಬೇಕು’ ಎಂದು ಸಚಿವರು ಕರೆ ನೀಡಿದರು.
BREAKING NEWS: ‘ಕಾಂಗ್ರೆಸ್ ಪಕ್ಷ’ದ ‘ಯೂಟ್ಯೂಬ್ ಚಾನೆಲ್’ ಡಿಲೀಟ್ | Congress YouTube channel deleted
‘ಸಮಾಜದ ಕಟ್ಟ ಕಡೆಯ ಮನುಷ್ಯನ ಅಭಿವೃದ್ಧಿಗೆ, ಶ್ರೇಯಸ್ಸಿಗೆ ಕೆಲಸ ಮಾಡಬೇಕು ಎಂದು ದೀನ ದಯಾಳ್ ಉಪಾಧ್ಯಾಯ ಅವರು ಹೇಳುತ್ತಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಗಳಾಗಿದ್ದ ಅವಧಿಯಲ್ಲಿ ಸರ್ವ ಶಿಕ್ಷಣ ಅಭಿಯಾನದ ಮೂಲಕ ದೇಶದ ಮೂಲೆ ಮೂಲೆಯಲ್ಲಿ ಶಾಲೆಗಳ ನಿರ್ಮಾಣ, ಶೌಚಗೃಹ, ನೀರಿನ ಸಂಪರ್ಕ ಕಲ್ಪಿಸಿದರು. ನಮ್ಮ ಸರ್ಕಾರವೂ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ, ಅಗತ್ಯತೆ ಅನುಸಾರ ಮೂಲಸೌಕರ್ಯ ಉತ್ತಮಗೊಳಿಸಲು 8,100 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಸಚಿವರು ನುಡಿದರು.
‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಗೃಹಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 250 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಶೌಚಗೃಹ ನಿರ್ಮಾಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಅವುಗಳ ನಿರ್ವಹಣೆಯಲ್ಲಿ ಸಮಸ್ಯೆ ಇದೆ. ಶೌಚಗೃಹಗಳ ಸ್ವಚ್ಛತೆಗೆ ಪ್ರತಿಯೊಬ್ಬರು ಮಹತ್ವ ನೀಡಬೇಕಿದೆ. ಮಕ್ಕಳಿಗೆ ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಮನೆಯಲ್ಲಿ ಪಾಲಕರು ತಿಳುವಳಿಕೆ ನೀಡಬೇಕು’ ಎಂದು ಸಚಿವರು ಹೇಳಿದರು.
BIG NEWS: ರಾಜ್ಯ ಸರ್ಕಾರದಿಂದ 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ, ಸದಸ್ಯರ ನೇಮಿಸಿ ಆದೇಶ
2023ರ ಫೆಬ್ರವರಿಯಲ್ಲಿ ಮತ್ತೆ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ
‘ಈ ಹಿಂದೆ 10 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸುಮಾರು 3,800 ಶಿಕ್ಷಕರು ಮಾತ್ರ ಭರ್ತಿಯಾಗಿದ್ದರು. ಈ ಬಾರಿ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಹುದ್ದೆಗಳು ಭರ್ತಿಯಾಗಬಹುದು ಎಂಬ ವಿಶ್ವಾಸವಿದೆ. ನವೆಂಬರ್ನಲ್ಲಿ ಟಿಇಟಿ ಪರೀಕ್ಷೆ ಹಾಗೂ ಮುಂದಿನ ವರ್ಷ ಫೆಬ್ರವರಿಯಲ್ಲಿ ಮತ್ತೊಂದು ಸುತ್ತಿನ ಸಿಇಟಿ ಪರೀಕ್ಷೆ ನಡೆಸಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಲಿದೆ. ಈ ಮೂಲಕ ಶಿಕ್ಷಕರ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತೇವೆ’ ಸಚಿವರು ನುಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಣ ಸುಧಾರಣೆ ಸಲಹೆಗಾರರಾದ ಡಾ. ಎಂ.ಆರ್. ದೊರೆಸ್ವಾಮಿ, ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಡಾ.ಟಿ. ಸೋಮಶೇಖರ್ ಉಪಸ್ಥಿತರಿದ್ದರು.