ಬೆಂಗಳೂರು: ಕಳೆದ ಸ್ವಲ್ಪ ದಿನಗಳಿಂದ ಬಿಡುವು ಬಿಟ್ಟದ ಮಳೆರಾಯ ಮತ್ತೆ ರಾಜ್ಯದಲ್ಲಿ ಚುರುಕುಗೊಂಡಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭರ್ತಿ ಮಳೆಯಾಗುತ್ತಿದೆ. ಹೀಗಾಗಿ ಜನಜೀವನ ಮತ್ತೆ ಅಸ್ತವ್ಯಸ್ಥಗೊಂಡಿದೆ.
ಇಂದು ಸಹ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
೬೦ ಕಿ.ಮೀ ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಹೀಗಾಗಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.ಚಿಕ್ಕಮಗಳೂರು, ಶಿವಮೊಗ್ಗ, ಹಾಸನ , ಕೊಡಗು, ತುಮಕೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲರ್ಟ್ ಘೋಷಿಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ.