ಹೈದರಾಬಾದ್: ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಿನ್ನೆ ತಡರಾತ್ರಿ ಹೈದರಾಬಾದ್ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ಧಾರ್ಮಿಕ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಚಾರ್ಮಿನಾರ್ ಸೇರಿದಂತೆ ಹೈದರಾಬಾದ್ನ ಹಳೆಯ ನಗರ ಪ್ರದೇಶದ ಹಲವು ಸ್ಥಳಗಳಿಂದ ಪ್ರತಿಭಟನೆಗಳು ವರದಿಯಾಗಿವೆ.
ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿ, ಮಂಗಳವಾರ ಬಂಧಿಸಲಾಯಿತು. ಆದ್ರೆ, ಕೆಲವು ಗಂಟೆಗಳ ನಂತರ, ಕಸ್ಟಡಿಗಾಗಿ ಪೊಲೀಸರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದರಿಂದ ಅವರಿಗೆ ಜಾಮೀನು ನೀಡಲಾಯಿತು.
ಸಿಂಗ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ. ಅವರು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷ ಹೇಳಿದೆ.
ಸಿಂಗ್ ಬಿಡುಗಡೆಗೆ ವಿರುದ್ಧವಾಗಿ ಮಂಗಳವಾರ ರಾತ್ರಿ ನಗರದಲ್ಲಿ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
Big news: ಕಾಶ್ಮೀರದಲ್ಲಿ ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ʻರಕ್ತದಾನʼ ಮಾಡಿದ ʻಭಾರತೀಯ ಸೈನಿಕʼರು!
BIGG NEWS: ಪಶ್ಚಿಮ ಬಂಗಾಳದಲ್ಲಿ ಆನೆ ದಾಳಿಗೆ ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ