ಬೆಂಗಳೂರು : ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ. ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು.
ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ. 1/2
— H D Kumaraswamy (@hd_kumaraswamy) August 25, 2022
ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಕ್ಷಣವೇ ಸ್ವತಃ ಮುಖ್ಯಮಂತ್ರಿ ಶ್ರೀ @BSBommai ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ.
ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. 2/2
— H D Kumaraswamy (@hd_kumaraswamy) August 25, 2022