ಬೆಂಗಳೂರು : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಚಗೇರಿ ಹಾಗೂ ಇತರೆ 41 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಅಂದಾಜು ಪಟ್ಟಿಗೆ ಇಂದು ರಾಜ್ಯ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಚಗೇರಿ ಹಾಗೂ ಇತರೆ 41 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಯೋಜನೆಯಅನುಷ್ಠಾನವನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ (KTPP) ಅಡಿಯಲ್ಲಿ ಟೆಂಡರ್ ಆಧಾರದ ಮೇಲೆ ಗುತ್ತಿಗೆದಾರರಿಗೆ ವಹಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸ್ಥಳೀಯ ನಿರ್ಬಂಧನೆಗಳು, ಕಾಮಗಾರಿ ಅನುಷ್ಠಾನ, ಸ್ಥಳದಲ್ಲಿನ ಬದಲಾವಣೆ ಹಾಗೂ ಇತರೆ ನ್ಯಾಯಯುತವಾದ ಕಾರಣಗಳಿಂದ ಯೋಜನೆಯ ಅಂದಾಜುಮೊತ್ತವು ಪರಿಷ್ಕೃತಗೊಂಡಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.