ಬೆಂಗಳೂರು: ಕಾಂಗ್ರೆಸ್ ನ ಹೆಬ್ಬಾಳ ಶಾಸಕ ಭೈರತಿ ಸುರೇಶ್ ( MLA Byrathi Suresh ) ಅವರಿಗೂ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.
ನಿನ್ನೆ ಕೋವಿಡ್ ಸೋಂಕಿನ ಲಕ್ಷಣಗಳಿದ್ದ ಕಾರಣ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಪರೀಕ್ಷೆಗೆ ಸ್ವಾಬ್ ನೀಡಿದ ಬಳಿಕ ಮನೆಯಲ್ಲಿ ಕ್ವಾರಂಟೈನಲ್ಲಿ ಇದ್ದರು. ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಶಾಸಕ ಭೈರತಿ ಸುರೇಶ್ ಅವರು, ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ