ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : 7 ಜಿಲ್ಲೆಗಳಲ್ಲಿ ಹೊಸ ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ 60 ಕಿ.ಮೀ. ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.