ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರಿ ಮಳೆ ಆಗುತ್ತಿದ್ದು, ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು,ಕೆಲಸಕ್ಕೆ ಹೋಗುವವರು ಪರದಾಡುವಂತಾಗಿದೆ.
GOOD NEWS: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋ ಜನರಿಗೆ KSRTC ಕಡೆಯಿಂದ ಭರ್ಜರಿ ಡಿಸ್ಕೌಂಟ್
ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು,ಕೆಲಸಕ್ಕೆ ಹೋಗುವವರು ಪರದಾಡುವಂತಾಗಿದೆ. ಕೆ.ಆರ್ ಮಾರ್ಕೇಟ್, ಕಾರ್ಪೊರೇಷನ್, ಶಾಂತಿನಗರ, ಜಯ ನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆ ಶುರುವಾಗಿದೆ.
BIGG NEWS: ಗೌರಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ : ಸ್ತ್ರೀ ಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ ಘೋಷಣೆ
ಇಂದಿನಿಂದ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.