ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಜಾರಿಯಾಗಲಿದೆ.
ಪ್ರತಿ ಎಕರೆಗೆ ರೂ .250 / – ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು ” ರೈತ ಶಕ್ತಿ ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ . ಅದೇ ರೀತಿಯಲ್ಲಿ FRUITS ಪೋರ್ಟಲ್ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು.
BIGG NEWS : ಹೆಸ್ಕಾಂ ಗ್ರಾಹಕರೇ ಗಮನಿಸಿ : ಸೈಬರ್ ವಂಚಕರ ನಕಲಿ ಸಂದೇಶಗಳಿಂದ ಜಾಗೃತರಾಗಲು ಹೆಸ್ಕಾಂ ಮನವಿ
ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ, ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು . FRUITS ಪೋರ್ಟಲ್ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.
FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ .250 / – ರಂತೆ ಗರಿಷ್ಠ ಐದು ಎಕರೆಗೆ ರೂ .1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು . ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.
ರೈತರು ನಿಯಮಾನುಸಾರ ಸೂಚಿಸಿದಂತೆ ಯೋಜನೆಯ ಅರ್ಹತಾಧಾರರಾಗಿ ಫಲಾನುಭವಿಗಳಾಗುವಂತೆ ಕೃಷಿ ಸಚಿವರು ರಾಜ್ಯದ ರೈತರಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.